12:11 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಂಗ್ಳುರ್ ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ

13/02/2025, 21:34

ಮಂಗಳೂರು(reporterkarnataka.com): ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ 1991-93 ಅವಧಿಯ ಕೇಂದ್ರೀಯ ಅಧ್ಯಕ್ಷ, ಸಮಾಜ ಸೇವಕ, ಸಂಘಟನಾ ಚತುರ ಹಾಗೂ ನಿವೃತ್ತ ಶಿಕ್ಷಕ ಬೆಳ್ತಂಗಡಿ ನಿವಾಸಿ ಕಾಶ್ಮೀರ್ ಮಿನೇಜಸ್ (79 )
ಸವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬುಧವಾರ ನಿಧನರಾದರು.
ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012 ಕಾರ್ಯನಿರ್ವಹಿಸಿರುವ ಅವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್.ಡಿ.ಎಂ. ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿ, ಎಸ್.ಡಿ.ಎಂ. ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.
ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಸಂಘಟನೆಯಲ್ಲಿ ನಿಷ್ಟಾವಂತರಾಗಿ ಸೇವೆಯನ್ನು ಸಲ್ಲಿಸಿ ಸಂಘಟನೆ ಬಲಿಷ್ಠಗೊಳಿಸುವುದರೊಂದಿಗೆ ಅದರ ಅಭಿವೃದ್ಧಿಗೆ ಕಾರಣಕರ್ತರಾದ ಇವರ ನಿಧನಕ್ಕೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ ಬಂಟ್ವಾಳ, ಮಾಜಿ ಅಧ್ಯಕ್ಷರಾದ ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರು, ಕೇಂದ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು