11:25 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ

14/02/2025, 19:05

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಸಚಿವರು ಈ ಸಂದರ್ಭಭದಲ್ಲಿ ಹೇಳಿದರು.


ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ನುಡಿದರು.
ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ, ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದೂ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸಚಿವ ವಿ.ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು