6:50 AM Friday27 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಕುಪ್ಪಳ್ಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ: ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ?

15/02/2025, 15:21

ರಶ್ಮಿ ಶ್ರೀಕಾಂತ್ ನಾಯಕ್

info.reporterkarnataka@gmail.com

ತೀರ್ಥಹಳ್ಳಿಯ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಮ್ಮ ಸ್ಥಾನಕ್ಕೆ ಶುಕ್ರವಾರ
ರಾಜೀನಾಮೆ ಸಲ್ಲಿಸಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ಅವರಿಗೆ ತಾವು ರಾಜೀನಾಮೆ ಸಲ್ಲಿಸಿರುವುದನ್ನು ಕಡಿದಾಳ್ ಪ್ರಕಾಶ್ ಖಚಿತಪಡಿಸಿದ್ದು ಆದರೆ, ರಾಜೀನಾಮೆ
ನೀಡಲು ಕಾರಣ ಏನು ಎಂಬ ಬಗ್ಗೆ ಸ್ಪಷ್ಟವಾಗಿ ತಿಳಿಸಿಲ್ಲ.
ಕಳೆದ ಜನವರಿ 24ರಂದು ಕುಪ್ಪಳಿಯ ಹೇಮಾಂಗಣದಲ್ಲಿ ಕಡಿದಾಳ್ ಪ್ರಕಾಶ್ ಅವರ ಸಂಬಂಧಿಕರ ಕುಟುಂಬದ ಮಂತ್ರ ಮಾಂಗಲ್ಯವನ್ನು ಅದ್ಧೂರಿಯಾಗಿ ನಡೆಸಿದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕುಟುಂಬದವರೇ ಅದ್ದೂರಿಯಾಗಿ ಮಂತ್ರ ಮಾಂಗಲ್ಯ ಆಚರಿಸುವ ಮೂಲಕ ಕುವೆಂಪು ಆಶಯಕ್ಕೆ ಧಕ್ಕೆ ತಂದಿರುವ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಮದುವೆ ತಮ್ಮ ಸಂಬಂಧಿಕರ
ಕುಟುಂಬದ್ದೇ ಎಂಬುದನ್ನು ಒಪ್ಪಿಕೊಂಡಿದ್ದ ಕಡಿದಾಳ್ ಪ್ರಕಾಶ್ ಮಂತ್ರ ಮಾಂಗಲ್ಯವನ್ನು ಸ್ವಲ್ಪ ಮಟ್ಟಿಗೆ ಅದ್ದೂರಿಯಾಗಿ ನಡೆಸಲಾಗಿದೆ. ಮುಂದೆ ಇಂತಹ ಮದುವೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಜತೆಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಕೂಡ
ಅದ್ದೂರಿ ಮಂತ್ರ ಮಾಂಗಲ್ಯದ ಬಗ್ಗೆ ಸ್ಪಷ್ಟನೆ
ನೀಡಿದ್ದರು.
ಶಿಸ್ತು, ಅಚ್ಚುಕಟ್ಟುತನದ ಕಾರಣಕ್ಕೆ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಾರ್ಯ ವೈಖರಿ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿತ್ತು. ಕವಿಮನೆ, ಕವಿಶೈಲಕ್ಕೆ ಭೇಟಿ ನೀಡುವ ಕುವೆಂಪು ಅಭಿಮಾನಿಗಳು ಇಡೀ ಪರಿಸರದ ಅಚ್ಚುಕಟ್ಟಾದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಆದರೆ, ಅವರದ್ದೇ ಸಂಬಂಧಿಕರ ಅದ್ದೂರಿ ಮಂತ್ರ ಮಾಂಗಲ್ಯದಿಂದಾಗಿ ಕಡಿದಾಳ್ ಪ್ರಕಾಶ್ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದರಿಂದ
ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ
ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು