11:38 PM Tuesday15 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

ಕಟೀಲು ಮೇಳದ ಹಿರಿಯ ಹಾಸ್ಯಗಾರ ರವಿಶಂಕರ ವಳಕುಂಜರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

15/02/2025, 17:48

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಟೀಲು‌ ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ, ಹಾಸ್ಯಗಾರ ರವಿಶಂಕರ ವಳಕುಂಜ ಅವರನ್ನು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿ ವತಿಯಿಂದ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಶನಿವಾರ ಶಂಬೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯಕ್ಷಗಾನ ಬಯಲಾಟ ಸೇವೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷ ತೆಯಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಅನಂತ ಪದ್ಮನಾಭ ಅಸ್ರಣ್ಣ ಕಟೀಲು ಅವರು ಶುಭಹಾರೈಸಿ ಆಶೀರ್ವಚನ ನೀಡಿ ಮಾತನಾಡಿದರು. ಧಾರ್ಮಿಕ ಪರಿಷತ್ತು ರಾಜ್ಯ ಸದಸ್ಯ ಎ.ರವಿಶಂಕರ ಶೆಟ್ಟಿ ಬಡಾಜೆ ಗುತ್ತು, ಕೆ.ಕೆ. ಶೆಟ್ಟಿ ಕುಂಬ್ಳೆ (ರಾಜರಾಜೇಶ್ವರಿ ದೇವಸ್ಥಾನ) ಅವರು ಅಭಿನಂದನೆ ಸಲ್ಲಿಸಿದರು. ರವಿಶಂಕರ ವಳಕ್ಕುಂಜ ಸನ್ಮಾನ ಸ್ವೀಕರಿಸಿ ಮಾತನಾಡಿ ಬೊಂಡಾಲ ಮನೆತನದವರು ಯಕ್ಷಗಾನ ಹಾಗೂ ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.
ಗ್ರಾಮ‌ ಪಂಚಾಯತ್ ಅಧ್ಯಕ್ಷ ಸಂತೋಷ್ ‌ ಮತ್ತಿತರರು ಉಪಸ್ಥಿತರಿದ್ದರು.


ಬೊಂಡಾಲ ಸಂಸ್ಮರಣೆ ಮತ್ತು ಬಯಲಾಟ ಸಮಿತಿಯ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಸೀತಾರಾಮ ಶೆಟ್ಟಿ ವಂದಿಸಿದರು.
ಬಳಿಕ ಕಟೀಲು ಮೇಳದ‌ ವತಿಯಿಂದ ಶ್ರೀ ದೇವಿ ಮಹಾತ್ಮೆ ಬಯಲಾಟ ಪ್ರದರ್ಶನವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು