3:28 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಇಡೀ ವಿಶ್ವವೇ ತಿರುಗಿ ನೋಡುವಷ್ಟರ ಮಟ್ಟಿಗೆ ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿದೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

15/02/2025, 19:35

ಬೆಂಗಳೂರು(reporterkarnataka.com): ರೈಲ್ಚೇ ಕ್ಷೇತ್ರದಲ್ಲಿ ಇಡೀ ವಿಶ್ವವೇ ತಿರುಗಿನೋಡುವ ಮಟ್ಟಿಗೆ ಅಭಿವೃದ್ಧಿಯಾಗಲಿದ್ದು ಅದರಲ್ಲೂ ವಿಶೇಷವಾಗಿ ಕರ್ನಾಟಕ ರಾಜ್ಯದ ಪ್ರತಿ ರೈಲು ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಅವರು ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರದ ನೂತನ ಬಜೆಟ್ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ರೈಲ್ವೆ ಅಭಿವೃದ್ಧಿಯಾಗುತ್ತಿದೆ. ಕರ್ನಾಟಕ ರಾಜ್ಯದ ಪ್ರತಿ ರೈಲು ನಿಲ್ದಾಣಗಳನ್ನೂ ಮೇಲ್ದರ್ಜೆಗೇರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ರೈಲ್ವೆ ಫ್ಯಾಕ್ಟರಿ ಹಾಗೂ ಅವುಗಳಿಂದಾಗುವ ಉದ್ಯೋಗ ಸೃಷ್ಟಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ರೈಲ್ವೆ ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ, ಸಂಸದರಾದ ಪಿ.ಸಿ. ಮೋಹನ್, ಡಾ. ಸಿ.ಎನ್. ಮಂಜುನಾಥ್
ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿನಿ ಸೂರ್ಯ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು