4:51 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

16/02/2025, 18:35

*ರಾಜಕೀಯ ಕಾರಣಕ್ಕಾಗಿ ಮೈಸೂರು ಗಲವಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ*

ಹುಬ್ಬಳ್ಳಿ(reporterkarnataka.com): ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದರು.
ಮೈಸೂರಿನ ಉದಯಗಿರಿ ಗಲಾಟೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದರೋ‌ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು