10:15 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು