5:35 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ

17/02/2025, 11:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು