5:50 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Indian Journalist | ಪಣಜಿ: ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ನ್ಯಾಷನಲ್ ಕಾನ್ಫರೆನ್ಸ್

17/02/2025, 16:46

ಪಣಜಿ(reporterkarnataka.com): ಸಂಪೂರ್ಣವಾಗಿ ಸಾರ್ವಜನಿಕ ಸೇವೆಯಲ್ಲಿ ತೂಡಗಿಸಿಕೊಂಡ ಕ್ಷೇತ್ರ ಯಾವುದಾದರು ಇದ್ದಲ್ಲಿ ,ಅವು ಪತ್ರಿಕಾರಂಗ ಮತ್ತು ರಾಜಕಾರಣ ಮಾತ್ರ. ಇವೆರೆಡರ ಮೇಲೆ ಸಾಮಾನ್ಯ ಪ್ರಜೆಗಳು ಬಹಳಷ್ಟು ವಿಶ್ವಾಸ ಮತ್ತು ನಿರೀಕ್ಷೆ ಎರಡನ್ನೂ ಇಟ್ಟಿದ್ದಾರೆ, ನಾವು ಈ ನೆಲದ ಹಿತ ದೃಷ್ಟಿಯಿಂದ ಒಂದಾಗಿ ಸಾಗಿದಲ್ಲಿ ದೇಶದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲು ಸಾಧ್ಯ ಎಂದು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದರು.


ಅವರು ಗೋವಾದ ಕೋಲ್ವಾದಲ್ಲಿನ ಕೋಲ್ಮಾರ್ ಬೀಚ್ ರೆಸಾರ್ಟ್ ನ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಜರ್ನಲೀಸ್ಟ್ ಯೂನಿಯನ್ ಇದರ ನ್ಯಾಷನಲ್ ಎಕ್ಸಿಕ್ಯೂಟಿವ್ ಕಮಿಟಿ ಮೀಟಿಂಗ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ -2025 ಉದ್ಘಾಟಿಸಿ ಮಾತನಾಡುತ್ತಾ, ಪ್ರಜಾಪ್ರಭುತ್ವದ ಕಾವಲು ಕಾಯುವವರೇ ಪತ್ರಕರ್ತರು. ನಿಮ್ಮ ಕೆಲಸದಲ್ಲಿ ಏರಿಳಿತ ಇರಬಹುದು. ದೇಶದಲ್ಲಿ ಇವತ್ತು ಸಂವಿಧಾನದ ಸತ್ವವನ್ನು ರಕ್ಷಣೆ ಮಾಡಿಕೊಂಡು ಬಂದಿದ್ದೀರಿ. ಮಾದ್ಯಮ ಪ್ರಪಂಚದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅದರ ನಡುವೆಯೂ ಅನೇಕ ಮಾಧ್ಯಮಗಳು ವೃತ್ತಿಪರತೆ ಮರೆಯದೇ ಸಾಗುತ್ತಿರೋದು ಪ್ರಶಂಸಾರ್ಹ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ಆಗುತ್ತಿರಬೇಕು. ದೇಶದ ವಿವಿಧ ರಾಜ್ಯಗಳಿಂದ ಬಂದ ನಿಮಗೆಲ್ಲ ಶುಭ ಹಾರೈಕೆಗಳು ಎಂದು ಹೇಳಿದ ಖಾದರ್ ನಿಮಗೆ ಸರ್ಕಾರದಿಂದ ಹೆಚ್ಚಿನ ಸಹಕಾರ ಸಿಗಬೇಕು. ಈ ವಿಚಾರದಲ್ಲಿ ನಾನು ಗಮನ ಹರಿಸುತ್ತೇನೆ ಎಂದು ಹೇಳಿದರು.
ಇಳಕಲ್ ಮಠದ ಶ್ರೀ ಮಹಾಂತೇಶ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಇಂಡಿಯನ್ ಜರ್ನಲೀಸ್ಟ್ ಯೂನಿಯನ್ ಅಧ್ಯಕ್ಷ ಕೆ. ಪಿ. ಪಂಡಿತ್, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಮುರುಗೇಶ್ ಶಿವಪೂಜಿ, ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಉಪಸ್ಥಿತರಿದ್ದರು.
ಈ ಒಂದು ರಾಷ್ಟ್ರೀಯ ಸಭೆಯಲ್ಲಿ ಬೇರೆ ಬೇರೆ ರಾಜ್ಯದ ಅಧ್ಯಕ್ಷರುಗಳು ಪತ್ರಿಕಾ ರಂಗದ ಸವಾಲುಗಳ ಬಗ್ಗೆ ವಿಚಾರ ವಿನಿಮಯ ಮಾಡಿದರು. ಸುಮಾರು 20 ರಾಜ್ಯಗಳಿಂದ ಬಂದ 250 ಪತ್ರಕರ್ತರು ಆಗಮಿಸಿದ್ದರು. ಮಧ್ಯಾಹ್ನ ನಂತರ ಪ್ರಿಂಟ್ ಮೀಡಿಯಾ ಮತ್ತು ಡಿಜಿಟಲ್ ಮೀಡಿಯಾ ಎಂಬ ವಿಷಯ ದ ಬಗ್ಗೆ ನಡೆದ ಸಂವಾದದಲ್ಲಿ ಪಾಲ್ಗೊಂಡು ನುರಿತ ಸೀನಿಯರ್ ಜರ್ನಲಿಸ್ಟ್ ಗಳ ಅನುಭವದ ಮಾತುಗಳೊಂದಿಗೆ ಆ ದಿನದ ವಿಚಾರಧಾರೆಗೆ ಪೂರ್ಣ ವಿರಾಮ.
ಈ ಸಂದರ್ಭದಲ್ಲಿ ವೈದ್ಯಕೀಯ (ಕಣ್ಣಿನ)ಕ್ಷೇತ್ರದಲ್ಲಿ ಸಾಧನೆ ಮಾಡಿದ್ದ ಹಿರಿಯ ಡಾ. ಸುಬ್ಬಣ್ಣ ಶೆಟ್ಟಿ ಅವರಿಗೆ ಐಜೆಯು ನ್ಯಾಷನಲ್ ಅಚೀವ್ ಮೆಂಟ್ -2025 ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಪ್ರಿಯಾ ಸುದೇಶ್ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಅದೇ ದಿನ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೇದಿಕೆಯಲ್ಲಿ ಅಂಕಲಿ ಮಠದ ಸ್ವಾಮೀಜಿ, ಗೋವಾ ಕನ್ನಡ ಸಂಘದ ಅಧ್ಯಕ್ಷ ಬಸವರಾಜ್ ಮೇಟಿ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಸಭೆಯಲ್ಲಿ ಭಾಗವಹಿಸಿದ ಹಿರಿಯ ಪತ್ರಕರ್ತರನ್ನು ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು