12:11 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

19/02/2025, 21:49

ಕೋಲಾರ(reporterkarnataka.com): ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತಾಸಕ್ತಿಯನ್ನು ಕಾಪಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ 25 ಲಕ್ಷರೂ ಅನುದಾನ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳನ್ನು ಬುಧವಾರ ಬೆಂಗಳೂರಿನ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಘದಿಂದ ಸನ್ಮಾನಿಸಿ ಧನ್ಯವಾದ ಸಲ್ಲಿಸಿದ ವೇಳೆ ಅವರು ಮಾತನಾಡಿದರು.


ತಮ್ಮ ಸಾರ್ವಜನಿಕ ಜೀವನದುದ್ದಕ್ಕೂ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಸ್ವಾತಂತ್ರ್ಯ ರಕ್ಷಣೆಗೆ ಆದ್ಯತೆ ನೀಡಿರುವುದಾಗಿ ತಿಳಿಸಿದ ಸಿದ್ಧರಾಮಯ್ಯ ಅವರು, ಸರ್ಕಾರ ಬಿಡುಗಡೆ ಮಾಡಿರುವ 25 ಲಕ್ಷ ರೂ. ಅನುದಾನವನ್ನು ಪತ್ರಕರ್ತರ ಹಿತಾಸಕ್ತಿಗೆ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 256 ಮಂದಿ ಸದಸ್ಯರ ಹಿತರಕ್ಷಣೆ ಮತ್ತು ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಬಳಕೆ ಮಾಡಲು ಒಂದುಕೋಟಿ ರೂಗಳ ಕಲ್ಯಾಣನಿಧಿಯನ್ನು ಸ್ಥಾಪಿಸಲು ಸಂಘವು ಉದ್ದೇಶಿಸಿದೆ. ಇದುವರೆಗೂ ಸಂಘದಲ್ಲಿ ಸಂಗ್ರಹವಾಗಿರುವ 5ಲಕ್ಷರೂ ಜೊತೆಗೆ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಸೇರಿಸಿ ಒಟ್ಟು 30ಲಕ್ಷರೂಗಳ ಠೇವಣೆಯನ್ನು ಬ್ಯಾಂಕಿನಲ್ಲಿ ಇರಿಸಲಾಗಿದೆ. ಅದರಿಂದ ಬರುವ ಬಡ್ಡಿಯಲ್ಲಿ ಆಪದ್ಧನವಾಗಿ ಬಳಸಿಕೊಳ್ಳಲಾಗುವುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಕೋಲಾರ ಜಿಲ್ಲೆಯವರೇ ಆದ ಕೆ.ವಿ.ಪ್ರಭಾಕರ್ ಅವರು, ತವರೂರಿನ ಮೇಲಿನ ಪತ್ರಕರ್ತರ ಬಗ್ಗೆ ಕಾಳಜಿ ವಹಿಸಿ ಸರ್ಕಾರದ ಅನುದಾನ ಬಿಡುಗಡೆಯೂ ಸೇರಿದಂತೆ ಸಂಘದ ಎಲ್ಲಾ ಬೇಡಿಕೆಗಳಿಗೆ ಒತ್ತಾಸೆಯಾಗಿ ನಿಂತಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಆರ್ಥಿಕ ಸಲಹೆಗಾರ ಬಸವರಾಜರಾಯ ರೆಡ್ಡಿ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಎಂ.ವಾಸುದೇವ ಹೊಳ್ಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‌ ಕುಮಾರ್, ಪತ್ರಕರ್ತರ ಕಲ್ಯಾಣನಿಧಿಯ ಸದಸ್ಯ ಪಾ.ಶ್ರೀ.ಅನಂತರಾಮ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು