ಇತ್ತೀಚಿನ ಸುದ್ದಿ
ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ, ಕೃಷಿ ಅಧಿಕಾರಿ ಸಿದ್ದಪ್ಪ ಸಸ್ಪೆಂಡ್
20/02/2025, 15:54

ಶಿವು ರಾಠೋಡ ಹುಣಸಗಿ ರಾಯಚೂರು
info.reporterkarnataka@gmail.com
ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಆರೋಪದ
ಹಿನ್ನೆಲೆಯಲ್ಲಿ ಲಿಂಗಸುಗೂರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಡಿ. ನಾಗರತ್ನ ಎಚ್. ಹುಲಕೋಟಿ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿಫಾರಸ್ಸು ಮೇರೆಗೆ ಕರ್ನಾಟಕ ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲಿಂಗಸುಗೂರ ತಾಲೂಕಿನ ಆನೆಹೋಸೂರ ಹಾಗೂ ಇತರೆ ಗ್ರಾಮ ಪಂಚಾಯತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆಯ ಮುಖೇನ ಅನುಷ್ಠಾನಗೊಂಡ ಕಾಮಗಾರಿಗಳಿಲ್ಲಿ 2,75,7307 ಕೋಟಿ ರೂ ಗಳ ಅವ್ಯವಹಾರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಲಿಂಗಸುಗೂರ ಅವರು ಕೋರಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆ 7 ತನಿಖಾ ಅಧಿಕಾರಿಗಳ ತಂಡ ವರದಿ ಹಿನ್ನಲೆಯಲ್ಲಿ ಉದ್ಯೋಗ ಖಾತ್ರಿ ಬದು ನಿರ್ಮಾಣ ಕಾಮಗಾರಿ ಅವ್ಯವಹಾರ ಅನುದಾನ ದುರ್ಬಳಕೆಗೆ ಕಾರಣವಾಗಿದೆ. ಎ.ಡಿ. ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ವಿರುದ್ಧ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸರಕಾರದ ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಿದ್ದಾರೆ. ಅದರಂತೆ ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ದೃಢಪಟ್ಟಿದ್ದು,
ಕೃಷಿ ಇಲಾಖೆ ಆಯುಕ್ತರು ಕೃಷಿ ಸಹಾಯಕ ನಿರ್ದೇಶಕಿ ನಾಗರತ್ನ ಹಾಗೂ ಕೃಷಿ ಅಧಿಕಾರಿ ಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವರು. ರಾಯಚೂರು ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಕೃಷಿ ಆಯುಕ್ತರಿಗೆ ಪತ್ರ ಬರೆದು ಲಿಂಗಸುಗೂರಿನ ಕೃಷಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು.