8:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ: ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

20/02/2025, 23:35

ಹುಬ್ಬಳ್ಳಿ(reporterkarnataka.com): ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ 10 ಕೆಜಿ ಪಡಿತರ ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ಬದಲು ₹34 ಹಣ ನೀಡುತ್ತಿತ್ತು. 6 ತಿಂಗಳ ಹಿಂದೆಯೇ ಕೇಂದ್ರ ಕಡಿಮೆ ಬೆಲೆಗೆ ಹೆಚ್ಚುವರಿ ಅಕ್ಕಿ ಕೊಡಲು ಸಿದ್ಧವೆಂದು ತಿಳಿಸಿದ್ದರೂ ಖರೀದಿಗೆ ಮುಂದಾಗಿರಲಿಲ್ಲ ಎಂದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು ಎಂದರು.
ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿದರೆ, ರಾಜ್ಯ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಖರೀದಿಗೆ ಮುಂದಾಗಿರಲಿಲ್ಲ ಎಂದರು ಜೋಶಿ.
ರಾಜ್ಯಕ್ಕೆ ಬೇಕಾದಷ್ಟು ಅಕ್ಕಿ ಲಭ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದು 5 ತಿಂಗಳಾದರೂ ಪ್ರತಿಕ್ರಿಯಿಸಿರಲಿಲ್ಲ. ₹ 22.50 ಕಡಿಮೆ ಬೆಲೆ ವಿಧಿಸಿದರೂ ರಾಜ್ಯ ಸರ್ಕಾರ ಮನಸ್ಸು ಮಾಡಿರಲಿಲ್ಲ ಎಂದರು.
ರಾಜ್ಯದ ಜನಕ್ಕೆ ಇತ್ತ ಹೆಚ್ಚುವರಿ 5 ಕೆಜಿ ಅಕ್ಕಿಯೂ ಇಲ್ಲ, ಬದಲಿಗೆ ಹಣವನ್ನೂ ಸರ್ಕಾರ ಜಮೆ ಮಾಡುತ್ತಿರಲಿಲ್ಲ. ವಂಚನೆ ಬಹಿರಂಗಗೊಳ್ಳುತ್ತಿದ್ದಂತೆ ಈಗ ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಖರೀದಿಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು