3:22 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ

21/02/2025, 09:02

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.


ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ ಸಂಗ್ರಹವಿದೆ. ಇದಕ್ಕೆ ಪ್ರೋತ್ಸಾಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಇವರೊಂದಿಗೆ ಜೆಎಸ್‌ಡಬ್ಲ್ಯು ಜಿಂದಾಲ್ ಸಹಯೋಗದಲ್ಲಿ ಜಿಂದಾಲ್ ಆವರಣದ ವಿವಿಧ 15 ಸ್ಥಳಗಳಲ್ಲಿ ರಕ್ತ ಭಂಡಾರ ಮೂಲಕ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಹಾಗೂ ರಕ್ತದ ಕೊರತೆ ತಗ್ಗಿಸಲು ರಕ್ತದಾನ ಶಿಬಿರವು ಫೆ.22 ರ ವರೆಗೆ ನಡೆಯಲಿದ್ದು, ಈ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಪ್ರತಿಯೊಬ್ಬರೂ ರಕ್ತದಾನ ಮಾಡಬಹುದು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಅಧಿಕಾರಿ ಡಾ.ಇಂದ್ರಾಣಿ ವಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮಲ್ಲಿನ ಎಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದಾಗಿದ್ದು, ಅದರಲ್ಲಿ ರಕ್ತದಾನ ಬಹುಮುಖ್ಯವಾಗಿದೆ. ಜಿಲ್ಲೆಯ ಬಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಇತರೆ ರಕ್ತ ಕೇಂದ್ರಗಳಲ್ಲಿ ಅತಿ ಅವಶ್ಯಕವಾಗಿದೆ ಎಂದರು.
ಅಪಘಾತಗಳಿಂದ ಗಾಯಗೊಂಡವರಿಗೆ ಹಾಗೂ ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರಿಗೆ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ಮತ್ತು ಥಲಸೀಮಿಯಾ ದಂತಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ನಿರಂತರವಾಗಿ ರಕ್ತದ ಅವಶ್ಯಕತೆ ಇದೆ. ರಕ್ತದಾನದಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಗೆ ನಿರಂತರವಾಗಿ ಸಹಕಾರಿಯಾಗಲಿದೆ ಎಂದರು.
ಈ ಶಿಬಿರದಲ್ಲಿ 5000 ರಕ್ತ ಯುನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ವರ್ಷದಲ್ಲಿ ಒಟ್ಟು 13,792 ರಕ್ತ ಯುನಿಟ್ ಸಂಗ್ರಹ ಮಾಡುವ ಗುರಿ ಇದ್ದು, ಈವರೆಗೆ 6000 ರಕ್ತ ಯುನಿಟ್ ಸಂಗ್ರಹ ಮಾಡಲಾಗಿದೆ ಎಂದು ಅವರು ತಿಳಿಸಿದರು.
18 ವರ್ಷ ತುಂಬಿದ ಎಲ್ಲಾ ಅರ್ಹ ಪುರುಷ ಮತ್ತು ಮಹಿಳೆಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಿ ಜೀವ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ರಕ್ತದಾನ ಶಿಬಿರ ನಡೆಯುವ ಸ್ಥಳ:ಜಿಂದಾಲ್‌ನ ಓಪಿಜೆ ಸೆಂಟರ್‌ನ ತಮನ್ನಾ ಶಾಲೆ, ಜಿಂದಾಲ್ ಸಂಜೀವಿನಿ ಆಸ್ಪತ್ರೆ, ವಿದ್ಯಾನಗರದ ಆರೋಗ್ಯ ಕೇಂದ್ರ ಮತ್ತು ಲಿಟಲ್ ಎಲ್ಲೆ, ಹೆಚ್‌ಎಸ್‌ಟಿ ಕಾಂಪ್ಲೆಕ್ಸ್, ಸಿಆರ್‌ಎಂ-1 ಪ್ಲಾö್ಯಂಟ್, ಲಾಜಿಸ್ಟಿಕ್ ಪ್ಲಾಂಟ್, ಎಸ್‌ಎಂಎಸ್-4 ಪ್ಲಾö್ಯಂಟ್, ಹೆಚ್‌ಆರ್‌ಡಿ ಪ್ಲಾö್ಯಂಟ್, ಜೆಎಸ್‌ಎಂಎಸ್‌ಹೆಚ್‌ನ ಸ್ಟೆಪ್‌ಡೌನ್ ಐಸಿಯು ಮತ್ತು ಜೆಎಸ್‌ಡಬ್ಲೂö್ಯ ಎನರ್ಜಿ ಸಭಾಂಗಣದಲ್ಲಿ ಬೆಳಿಗ್ಗೆ 09 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು