11:01 PM Saturday22 - February 2025
ಬ್ರೇಕಿಂಗ್ ನ್ಯೂಸ್
ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ…

ಇತ್ತೀಚಿನ ಸುದ್ದಿ

Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ

21/02/2025, 21:58

ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.‌ಪೂಜಾರಿ ಹೇಳಿದರು.
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿ, ಸರ್ಕಾರಿ ಆಸ್ಪತ್ರೆಯೊಂದು ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಅವಿರತ ಶ್ರಮದಿಂದ ನಗರದ ಖಾಸಗಿ ಆಸ್ಪತ್ರೆಯನ್ನೂ ಮೀರಿಸುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.


ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಕಾರ್ಯವನ್ನು ಶ್ಲಾಘಿಸಿ ಗೌರವಿಸಲಾಯಿತು.
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್ ಮೊದಲಾದವರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು