12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್ ಕೂಡ ಶಾಮೀಲು

22/02/2025, 09:58

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ.
ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ಲೂಟಿಯಾಗಿದೆ. ಲಿಂಗಸುಗೂರು ಕೆನರಾ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಸರ್ಕಾರದ ಹಣವನ್ನು ಅಧಿಕಾರಿಗಳು ಕುಟುಂಬಸ್ಥರು ಹಾಗೂ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮುಜರಾಯಿ ಖಾತೆಯ ಹಣ ಲಪಟಾಯಿಸಿದ್ದು, ಕಚೇರಿಯ ಐವರು ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ದ್ವಿತೀಯ ದರ್ಜೆ ಸಹಾಯಕನ ಮೇಲೆ ಆರೋಪ ಹೊರಿಸಿ ಕೈ ತೊಳೆದುಕೊಳ್ಳಲು ಸಂಚು ನಡೆದಿಸಿದ್ದರು ಎನ್ನಲಾಗಿದೆ. ಎಸ್‌ಡಿಎ ಯಲ್ಲಪ್ಪನಿಂದ ತನ್ನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಹಾಗೂ ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆಯಾಗಿದೆ.
ಸದ್ಯ ಹಗರಣ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರು ಎಸ್‌ಡಿಎ ಯಲ್ಲಪ್ಪ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು