2:51 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು