9:27 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮೂಡಿಗೆರೆ: ಆಕಸ್ಮಿಕ ಅಗ್ನಿ ಅನಾಹುತಕ್ಕೆ ಮನೆ ಸಂಪೂರ್ಣ ಸುಟ್ಟು ಭಸ್ಮ; ಮಹಿಳೆ ಗಂಭೀರ

24/02/2025, 14:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.
*ಸ್ಥಿತಿ ಗಂಭೀರ:* ಅಗ್ನಿ ಅವಘಡದಲ್ಲಿ ಮನೆಯಲ್ಲಿ ಇದ್ದ ರೇಖಾ (36) ತೀವ್ರವಾಗಿ ಗಾಯಗೊಂಡು, ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡಿಗೆಗೆ ಸ್ಟವ್ ಹಚ್ಚುವಾಗ ಅವಘಡ ಎಂಬ ಶಂಕೆ
ಅಡಿಗೆಗೆ ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು