5:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು