8:30 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು