2:39 PM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Film Festival | ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿಎಂ ಸಿದ್ದರಾಮಯ್ಯ

01/03/2025, 22:01

*ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ*

ಬೆಂಗಳೂರು(reporterkarnataka.com): ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.
ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.
ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.
ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು.


ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದರು.
ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು