5:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

PU Student Missing | ದಿಗಂತ್ ನಾಪತ್ತೆ ಪ್ರಕರಣ: ಫರಂಗಿಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್; ಬೃಹತ್ ಪ್ರತಿಭಟನೆ

01/03/2025, 22:34

ತನಿಖೆ ಚುರುಕುಗೊಳಿಸಿ ಪ್ರಕರಣ ಭೇದಿಸಲು ಗರಿಷ್ಠ ಪ್ರಯತ್ನ: ಪೋಲಿಸ್‌ ವರಿಷ್ಠಾಧಿಕಾರಿ ಯತೀಶ್ ಎನ್.

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ 5 ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ಸರಕಾರದ ಮೇಲೆ ಒತ್ತಡ ಹಾಕಲು ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಫೆ. 1ರಂದು ಶನಿವಾರ ಬೃಹತ್ ಪ್ರತಿಭಟನೆ ಮಾಡಿ ಬಾಲಕನ ಪತ್ತೆಗೆ ಒತ್ತಾಯ ಮಾಡಿದರು. ಪೇಟೆಯಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಸಂಶಯಾಸ್ಪದ ರೀತಿಯಲ್ಲಿ ಕಾಣೆಯಾದ ದಿಗಂತ್ ಪತ್ತೆಗೆ ಒತ್ತಾಯ ಮಾಡಿದರು. ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಕಾರೊಂದು ಸ್ಥಳೀಯವಾಗಿ ಓಡಾಡಿರುವ ಬಗ್ಗೆ ಸ್ಥಳೀಯರು ಮತನಾಡಿಕೊಳ್ಳುತ್ತಿದ್ದಾರೆ.
ಈ ಸಂದರ್ಭ ಮಾತನಾಡಿದ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ಮಾತನಾಡಿ, ತಂಡಗಳಾಗಿ ನಾವು ತನಿಖೆ ನಡೆಸುತ್ತಿದ್ದೇವೆ. ಕ್ಲಿಷ್ಟಕರವಾದ ಪ್ರಕರಣಗಳು ಸ್ವಲ್ಪ ಸಮಯ ತಗಲುತ್ತದೆ. ಜಿಲ್ಲೆಯ ವಿವಿಧ ಠಾಣೆಯ ನುರಿತ ಪೋಲೀಸರನ್ನು ಕರೆಸಿ ತನಿಖೆ ತೀವ್ರಗೊಳಿಸುತ್ತೇವೆ. ದಿಗಂತ್ ಪತ್ತೆಯಾಗುವವರೆಗೆ ನಾವು ವಿರಮಿಸುವುದಿಲ್ಲ ಎಂದು ಭರವಸೆ ನೀಡಿದರು. ತನಿಖೆ ಮುಂದುವರಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಂಸದ ಕ್ಯಾ, ಬ್ರಿಜೇಶ್ ಚೌಟ ಮಾತನಾಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಗಾಂಜಾ ವಿರುದ್ಧ ಪೋಲೀಸರು ತನಿಖೆ ಮುಂದುವರಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಮರುಕಳಿಸಲಿಕ್ಕಿಲ್ಲ. ಪೊಲೀಸರು ಸದೃಢ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾ‌ರ್ ಬೊಟ್ಯಾಡಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದರು. ಎರಡು ದಿನಗಳಲ್ಲಿ ಬಾಲಕ ಪತ್ತೆಯಾಗದಿದ್ದರೆ, ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಿಭಟನಕಾರರು ಎಚ್ಚರಿಸಿದರು.


ಪ್ರಮುಖರಾದ ಉಮೇಶ್‌ ಶೆಟ್ಟಿ ಬರ್ಕೆ,ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಭರತ್ ಕುಮ್ಡೇಲು, ತಾರಾನಾಥ ಕೊಟ್ಟಾರಿ ತೇವು, ನಂದನ್ ಮಲ್ಯ,ಧನರಾಜ್ ತೇವು, ಮನೋಜ್ ಆಚಾರ್ಯ, ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಸೇರಿದ್ದರು.
ಈ ಸಂದರ್ಭ ಪ್ರಮುಖರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ ಗಾಂಭೀರ, ಭರತ್ ಕುಮ್ಡೇಲು, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್ ತೇವು, ವಿಠ್ಠಲ್ ಆಳ್ವ, ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು