6:11 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;…

ಇತ್ತೀಚಿನ ಸುದ್ದಿ

Central Govt purchase | ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ್

01/03/2025, 23:06

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ್ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬೀದರ್‌, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಸುಬೆ ಬೆಳೆಯಲಾಗುತ್ತಿದೆ.
ಜನವರಿಯಿಂದ ಮಾರ್ಚ ಅವಧಿಯಲ್ಲಿ ಕಟಾವು ಪ್ರಕ್ರಿಯೆ ನಡೆಯಲಿದ್ದು, ಫೆಬ್ರವರಿಯಿಂದ ಏಪ್ರಿಲ್‌ ಅವಧಿಯಲ್ಲಿ ಮಾರುಕಟ್ಟೆಗೆ ಅಧಿಕ ಪ್ರಮಾಣದಲ್ಲಿ ಆವಕವಾಗಲಿದೆ. ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡದೆ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು