1:41 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಸಕ್ಕರೆ ತಂತ್ರಜ್ಞಾನದಲ್ಲಿ ಎಂಎಸ್ಸಿ ಕೋರ್ಸ್‌ ಆರಂಭ: ಸಚಿವ ಶಿವಾನಂದ ಪಾಟೀಲ್

01/03/2025, 23:35

ಬೆಂಗಳೂರು(reporterkarnataka.com): ಬೆಳಗಾವಿಯ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಸಕ್ಕರೆ ತಂತ್ರಜ್ಞಾನದಲ್ಲಿ ಎಂಎಸ್ಸಿ., ಕೋರ್ಸ್‌ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್‌. ಪಾಟೀಲ್ ಹೇಳಿದ್ದಾರೆ.
ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಳಗಾವಿ ಸಮೀಪದ ಬೆನಕನಹಳ್ಳಿಯಲ್ಲಿ ಸಕ್ಕರೆ, ಮದ್ಯಸಾರ ಸಂಶೋಧನಾ ಕೇಂದ್ರ ಆರಂಭಿಸಲು ಹಾಗೂ ಆಸಕ್ತರಿಗೆ ಸಕ್ಕರೆ ಮತ್ತು ತಂತ್ರಜ್ಞಾನದಲ್ಲಿ ಪಿ.ಎಚ್‌ಡಿಗೆ ಅವಕಾಶ ಕಲ್ಪಿಸಲು ಆಡಳಿತ ಮಂಡಳಿ ನಿರ್ಣಯ ಮಾಡಿದೆ. ಕಾಲೇಜು ಆರಂಭಿಸಲು ಸುಮಾರು ರೂ 15 ಕೋಟಿ ಅಗತ್ಯವಿದ್ದು, ತಕ್ಷಣಕ್ಕೆ ರೂ 5 ಕೋಟಿ ತೆಗೆದಿರಿಸಲು ನಿರ್ಧರಿಸಲಾಯಿತು. ಹಾಗೂ ಕಾಲೇಜನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಬ್ಬಿನ ಬೆಳೆಗೆ ಬೆಂಕಿ ಬಿದ್ದು ನಷ್ಟ ಸಂಭವಿಸಿದಾಗ ಸಂಸ್ಥೆಯಿಂದ ಪರಿಹಾರ ನೀಡಲು ಕಾರ್ಪಸ್‌ ಫಂಡ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಉದ್ದಿಮೆಗೆ ಸಂಬಂಧಿಸಿದಂತೆ ಸಂಕಷ್ಟ (ಅಗ್ನಿ ಅವಘಡ) ಎದುರಾದಲ್ಲಿ ತಕ್ಕಮಟ್ಟಿಗೆ ಪರಿಹಾರ ನೀಡುವ ಉದ್ದೇಶವಿದ್ದು, ಮಾರ್ಗಸೂಚಿ ರೂಪಿಸಲಾಗುವುದು ಎಂದು ವಿವರಿಸಿದ್ದಾರೆ.
ಅಂಗಾಂಶ ಕೃಷಿ ಪ್ರಯೋಗಾಲಯ ಒಂಭತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ 16.47 ಲಕ್ಷ ಸಸಿಗಳನ್ನು ಉತ್ಪಾದಿಸಲಾಗಿದೆ. ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದಕ ಘಟಕ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 2023-24ರ ಅಂತ್ಯಕ್ಕೆ 8.26 ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗಿದೆ.
ಈಗ ರೈತ ರು ಬೆಳೆಯುತ್ತಿರುವ ಕೆಲವು ತಳಿಯ ಇಳುವರಿ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಉತ್ತಮ ಇಳುವರಿಯ ತಳಿಯನ್ನು ರೈತರಿಗೆ ವಿತರಣೆ ಮಾಡಬೇಕಿದ್ದು, ಈ ಉದ್ದೇಶಕ್ಕೆ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿ ಅವರ ಸಲಹೆ ಪಡೆದು ಯಾವ ತಳಿಯನ್ನು ಬೆಳೆಯಬೇಕು ಹಾಗೂ ಹೆಚ್ಚುವರಿ ಇಳುವರಿ ಕೊಡುವ ಕಬ್ಬನ್ನು ಎಸ್‌. ನಿಜಲಿಂಗಪ್ಪ ಸಂಸ್ಥೆಯಿಂದ ಅಭಿವೃದ್ಧಿ ಪಡಿಸಬೇಕು ಎಂದು ನಿರ್ಧರಿಸಲಾಯಿತು. ಅಂಗಾಂಶ ಕೃಷಿ ಪ್ರಯೋಗಾಲಯ ಹಾಗೂ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದನಾ ಘಟಕವನ್ನು ಮತ್ತಷ್ಟು ಬಲಪಡಿಸಬೇಕು. ಈ ಮೂಲಕ ಕಬ್ಬು ಬೆಳೆಗಾರರಿಗೆ ನೆರವಾಗಬೇಕು ಎಂಬ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ವರ್ಷದಲ್ಲಿ ಕೇವಲ 90 ದಿನ ಮಾತ್ರ ಕಾರ್ಯನಿರ್ವಹಣೆ ಮಾಡಿದರೆ ಲಾಭದಲ್ಲಿ ಮುನ್ನಡೆಸಲು ಕಷ್ಟಸಾಧ್ಯ. ಹೀಗಾಗಿ ಕನಿಷ್ಟ 150 ದಿನ ಕಾರ್ಯನಿರ್ವಹಿಸುವಂತಾಗಬೇಕು. ಕಬ್ಬು ನುರಿಸುವ ಅವಧಿ ಮುಗಿದ ನಂತರ ಉಪ ಉತ್ಪನ್ನಗಳ ತಯಾರಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಸೂಕ್ತ ಎಂದರು.
ಕಬ್ಬು ಬೆಳೆಗಾರರಿಗೆ ಸಲಹೆ ಸೂಚನೆ ನೀಡುವ ಉದ್ದೇಶದಿಂದ ದೇಶದ ವಿವಿಧ ಸಂಶೋಧನಾ ಕೇಂದ್ರಗಳ ಪರಿಣಿತರನ್ನು ಎಸ್. ನಿಜಲಿಂಗಪ್ಪ ಸಂಸ್ಥೆಗೆ ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದರು.
ತಾಂತ್ರಿಕ ಸಮರ್ಥತೆಯನ್ನು ಪರಿಗಣಿಸಿ ಪ್ರತಿ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಪ್ರತಿ ವರ್ಷ ಸಲ್ಲಿಸುವ ಆರ್.ಟಿ. 8 (ಸಿ) ಆಧಾರದ ಅಂಶಗಳನ್ನು ಪರಿಗಣಿಸಿ ಮತ್ತು ಕಬ್ಬು ಬೆಳೆಗಾರರಿಗೆ ಪಾವತಿ ಮಾಡಿದ ಕಬ್ಬಿನ ಬಿಲ್ಲಿನ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುವುದು. ಎಂದು ತಿಳಿಸಿದ್ದಾರೆ.

ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕರಾದ ಸತ್ಯಜಿತ್ ಪಾಟೀಲ್, ಸಿ.ಬಿ.ಪಾಟೀಲ್ ಅಧಿಕಾರಿಗಳಾದ ರಮಣ್ ದೀಪ್ ಚೌಧರಿ, ರವಿಕುಮಾರ್, ರಾಜಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು