11:55 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು: ಸಚಿವ ಕೆ.ಎಚ್. ಮುನಿಯಪ್ಪ

03/03/2025, 16:26

ಬೆಂಗಳೂರು,ವಿಧಾನಸೌಧ(reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು.ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSP ಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳು ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ ರೂ 4290ಗಳನ್ನು ಹಾಗೂ ಜೋಳ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳ 3371 ಹಾಗೂ ಮಾಲದಂಡಿ ಜೋಳ 3421 ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2300. ಗ್ರೇಡ್ ಎ 2320.ದರ ನಿಗದಿಯಾಗಿದ್ದು ಈ ಧರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂಧಾಯ ಮಾಡಬೇಕು ಎಂದರು.
ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾಣದ ವ್ಯವಸ್ಥೆಯನ್ನು ಕಲ್ಲಿಸಬೇಕು. ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು.


ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್,ಆಯುಕ್ತರಾದ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು