1:32 PM Friday27 - June 2025
ಬ್ರೇಕಿಂಗ್ ನ್ಯೂಸ್
ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ…

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು