7:10 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

Bollywood Actress | ಬಾಲಿವುಡ್ ನಟಿ, ಸಂಸದೆ ಕಂ ಗನಾ ರಣಾವತ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

04/03/2025, 19:36

ಮಂಗಳೂರು(reporterkarnataka.com): ಖ್ಯಾತ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಕಾಪು ಮಾರಿಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ನಟಿ,
ನಿನ್ನೆ ಕಾಪು ಮಾರಿಗುಡಿ ಹಾಗೂ ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದೇನೆ. ತಾಯಿಯ ದರ್ಶನ ಪಡೆದಿದ್ದೇನೆ. ಬಹಳ ವರ್ಷಗಳಿಂದ ಈ ಭಾಗಕ್ಕೆ ಬರಬೇಕೆಂಬ ಅಭಿಲಾಷೆ ಇತ್ತು.
ತಾಯಿ ತನ್ನ ಆಶೀರ್ವಾದ ನೀಡಲು ಕರೆಸಿಕೊಂಡಿದ್ದಾಳೆ.
ಸನಾತನ ಧರ್ಮ ಸನಾತನ ಸಂಸ್ಕೃತಿಯ ಬಗ್ಗೆ ಜಾಗೃತಿ ಯಾಗಿದೆ. ದೇಶ ಉನ್ನತ ಪ್ರಗತಿಯತ್ತ ಸಾಗುತ್ತಿದೆ.
ನಮ್ಮ‌ ಸನಾತನ ಧರ್ಮದ ಬಗ್ಗೆ ಜನರು ಜಾಗೃತರಾಗಿದ್ದಾರೆ ಎಂದರು.
ನಮ್ಮ ದೇವಾಲಯಗಳು ಕೇವಲ ದೇವರ ಆಲಯವಾಗಿ ಉಳಿದಿಲ್ಲ. ನಮ್ಮ ದೇವಾಲಯಗಳು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.
ಆಸ್ಪತ್ರೆ, ಶಾಲೆ, ಆಶ್ರಮಗಳನ್ನು ನಡೆಸುತ್ತಿದೆ. ದೇವಾಲಯಗಳು ನಮ್ಮ ಸಾಂಸ್ಕೃತಿಕ ಪ್ರತಿಬಿಂಬ.
ಕುಂಭಮೇಳ, ಸನಾತನ ಧರ್ಮದ ಬಗ್ಗೆ ಅವಹೇಳನ‌ ಟೀಕೆಗಳು ಮುಂದುವರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು,ವ
ದೇವರ ಆರತಿ ಬೆಳಗುವಾಗ ದುಷ್ಟ ಶಕ್ತಿಗಳು ಉರಿದು ಹೋಗುತ್ತವೆ. ದೇವಿಯ ಅವತಾರಗಳು ಈ ದುಷ್ಟ‌ ಶಕ್ತಿಗಳ ಸಂಹಾರಕ್ಕೆ ಆಗಿವೆ.
ಎಲ್ಲರ ಮೇಲೂ ಈಶ್ವರನ ಆಶೀರ್ವಾದವಿರಲಿ. ಟೀಕೆ ಮಾಡುವವರಿಗೆ, ಅವಹೇಳನ ಮಾಡಿದವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದು ನಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು