8:23 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ: 6 ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ: ವಿಧಾನ ಪರಿಷತ್ ನಲ್ಲಿ ಸಚಿವ ಎಂ.ಬಿ. ಪಾಟೀಲ್

04/03/2025, 21:07

ಬೆಂಗಳೂರು (reporterkarnataka.com) :ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು ರೂ 90.00 ಕೋಟಿಗಳ ವೆಚ್ಚದಲ್ಲಿ ಆಯೋಜಿಸಲು ಸರ್ಕಾರವು ಅನುಮೋದನೆ ನೀಡಿರುತ್ತದೆ. ಇದರಲ್ಲಿ ಇಲ್ಲಿಯವರೆಗೆ ರೂ 75.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸಮಾವೇಶವು ಇತ್ತಿಚೆಗೆ ಫೆಬ್ರವರಿ 14ರಂದು ಮುಕ್ತಾವಾಗಿದ್ದು, ಸಮಾವೇಶಕ್ಕಾಗಿ ತಗುಲಿದ ವಾಸ್ತವಿಕ ವೆಚ್ಚದ ವಿವರಗಳನ್ನು ಕ್ರೋಢೀಕರಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಒಟ್ಟು 3250 ಉದ್ದಿಮೆದಾರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ 266, ವಿದೇಶಗಳಿಂದ 72, ಕರ್ನಾಟಕ ರಾಜ್ಯದಿಂದ 2892 ಉದ್ದಿಮೆದಾರರು ಭಾಗವಹಿಸಿದ್ದರು. ಒಟ್ಟು 98 ಕಂಪನಿಗಳೊಂದಿಗೆ ಒಡಂಬಡಿಕೆಗಳಾಗಿವೆ. ಅವುಗಳ ಹೂಡಿಕೆಯು ರೂ. 6,23,970 ಕೋಟಿಯಾಗಲಿದೆ. ಅಲ್ಲದೆ, ರೂ. 4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆದಿರುತ್ತಾರೆ ಎಂದು ಅವರು ತಿಳಿಸಿದರು.
ಈ ಹಿಂದೆ ನಡೆದ ಇನ್ವೆಸ್ಟ್ ಕರ್ನಾಟಕ – 2022ರ ಸಮಾವೇಶದಲ್ಲಿ ಉದ್ಯಮ ಪ್ರಾರಂಭಿಸಲು 57 ಕಂಪನಿಗಳೊಂದಿಗೆ ಒಟ್ಟು 5,41,696/- ಕೋಟಿ ಬಂಡವಾಳ ಹೂಡಲು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು. ಸದರಿ 57 ಕಂಪನಿಗಳಲ್ಲಿ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 20 ಕಂಪನಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪ್ರಸ್ತಾವಗಳಿಂದ ಒಟ್ಟು ರೂ. 2,01,167 ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಹಾಗೂ 70,740 ಉದ್ಯೋಗ ಸೃಜನೆಯಾಗಲಿದೆ ಇವುಗಳಲ್ಲಿ 2 ಯೋಜನೆಗಳು ಅನುಷ್ಠಾನಗೊಂಡಿರುತ್ತದೆ. ಮುಂದುವರೆದು ಈ ಸಮಾವೇಶದ ಸಮಯದಲ್ಲಿ 606 ಯೋಜನೆಗಳಿಗೆ ಒಟ್ಟು ರೂ 3,26,015/- ಹೂಡಿಕೆಗೆ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಅನುಮೋದನೆ ನೀಡಲಾಗಿತ್ತು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು