9:29 PM Wednesday12 - November 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

MCC ATM | ಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕಿನ ಎಟಿಎಂ ಉದ್ಘಾಟನೆ

04/03/2025, 21:31

ಉಡುಪಿ(reporterkarnataka.com): ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಂಸಿಸಿ ಬ್ಯಾಂಕಿನ 8ನೇ ಎಟಿಎಂ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎಮ್ ಯಂತ್ರವನ್ನು ಎಎಸ್ ಯೂಸ್ಡ್ ಕರ‍್ಸ್ ಇದರ ಮ್ಹಾಲಕರಾದ ಸೌರಬ್ ಶೆಟ್ಟಿ ಅವರು ಎಟಿಎಮ್‌ನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶ್ರೀ ಶಂಶುದ್ದಿನ್ ಮೊದಿನ್ ಮುಖ್ಯ ಅತಿಥಿಯಾಗಿದ್ದರು ಹಾಗೂ ಶಾಖಾ ನಿರ್ದೇಶಕ ಎಲ್‌ರೋಯ್ ಕಿರಣ್ ಕ್ರಾಸ್ಟೊ ಸಮಾರಂಭದಲ್ಲಿ ಹಾಜರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸಹಕಾರ ರತ್ನ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬ್ರಹ್ಮಾವರದಲ್ಲಿ ಶಾಖೆಯು ಆರಂಭಗೊಳ್ಳಲು ಹಾಗೂ ರೂ. 10 ಕೋಟಿ ವ್ಯವಹಾರ ದಾಖಲಿಸಲು ಸಹಕರಿಸಿದ ಬ್ರಹ್ಮಾವರದ ಗ್ರಾಹಕರಿಗೆ ವಂದನೆಗಳನ್ನು ಸಲ್ಲಿಸಿದರು. ಬ್ರಹ್ಮಾವರದ ಜನತೆ ನೀಡಿದ ಸಹಕಾರದಿಂದ ಬ್ರಹ್ಮಾವರ ಶಾಖೆಯು ಈ ಸಾಧನೆ ಮಾಡಲು ಸಾಧ್ಯವಾಯಿತು.
ಶಾಖೆಯಲ್ಲಿ ಉತ್ತಮ ಸೇವೆ ಮತ್ತು ವಿಶ್ವಾಸರ್ಹತೆಯನ್ನು ಗಳಿಸುವಲ್ಲಿ ಯಶಸ್ವಿಯಾದರೆ ಮಾತ್ರ ಸಾಧನೆ ಮಾಡಲು ಸಾದ್ಯ. ಇದಕ್ಕಾಗಿ ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವರ್ಷ 30 ಕೋಟಿ ವ್ಯವಹಾರವನ್ನು ದಾಖಲಿಸಿ, ಶಾಖೆಯು ಲಾಭ ಗಳಿಸುವಲ್ಲಿ ಗ್ರಾಹಕರು ಸಹಕರಿಸಲು ಮತ್ತು ಶಾಖೆಯ ಸಿಬ್ಬಂದಿ ಶ್ರಮಿಸಲು ಕರೆ ಕೊಟ್ಟರು. ಕಳೆದ ವರ್ಷ ಶಾಖೆಯ ಉದ್ಘಾಟನಾ ಸಂದರ್ಭದಲ್ಲಿ ಆಶೀರ್ವಚಿಸಿದ ಧರ್ಮಗುರುಗಳಾದ ವಂ. ಫಾ| ಜೋನ್ ಫೆರ್ನಾಂಡಿಸ್ ಇವರಿಗೆ ವಂದನೆಗಳನ್ನು ಸಲ್ಲಿಸಿದರು.
ನೂತನ ಎಟಿಎಮ್‌ನ್ನು ಆಶೀರ್ವಚಿಸಿ ಮಾತನಾಡಿದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ಶುಭ ಹಾರೈಸಿದರು.
ಎಟಿಎಮ್ ಉಧ್ಘಾಟಿಸಿ ಮಾತನಾಡಿದ ಜೆರಾಲ್ಡ್ ಗೊನ್ಸಾಲ್ವಿಸ್ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಇವರ ಮುಂದಾಳುತ್ವದ ಆಡಳಿತ ಮಂಡಳಿಯ ಇತ್ತೀಚಿನ ಸಾಧನೆಯನ್ನು ಮತ್ತು ಫಲಿತಾಂಶದ ಬಗ್ಗೆ ಶ್ಲಾಘಿಸಿದರು. ಶಾಖೆಯು ಒಂದು ವರ್ಷದಲ್ಲಿಯೇ ರೂ.10 ಕೋಟಿ ಸಾಧನೆಗೈದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ನೂತನ ತಂತ್ರಜ್ಞಾನದಲ್ಲಿ ಹಿಂದೆ ಬಿದ್ದರೆ ಪ್ರಗತಿ ಅಸಾದ್ಯ, ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಿದ್ದರಿಂದ ಬ್ಯಾಂಕ್ ಪ್ರಗತಿಯಲ್ಲಿ ಮುಂದೆ ಇದೆ. ಬ್ಯಾಂಕ್ ತಂತ್ರಜ್ಞಾನದಲ್ಲಿ ಮೂಂಚೂಣಿಯಲ್ಲಿದ್ದು ಮುಂದೆಯೂ ಉತ್ತಮ ಪ್ರಗತಿ ಸಾಧಿಸಲಿ ಎಂದು ಶುಭ ಹಾರೈಸಿದರು.
ಶಾಖೆಯ ವಾರ್ಷಿಕೋತ್ಸವ ಸಂದರ್ಭವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರೂ. 10 ಕೋಟಿ ವ್ಯವಹಾರದ ಸಾಧನೆ ಮಾಡಿದ ಶಾಖೆಯ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ಇವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಜೆರಾಲ್ಡ್ ಗೊನ್ಸಾಲ್ವಿಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಮಹಾಪ್ರಬಂಧಕ ಸುನಿಲ್ ಮಿನೆಜಸ್ ವಂದಿಸಿದರು. ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿದರು.


ಉಡುಪಿ ಶಾಖಾ ವ್ಯವಸ್ಥಾಪಕ ಪ್ರದೀಪ್ ಡಿಸೋಜ, ಶಿರ್ವ ಶಾಖಾ ವ್ಯವಸ್ಥಾಪಕಿ ಅನ್ಸಿಲ್ಲಾ ಫೆರ್ನಾಂಡಿಸ್, ಕುಂದಾಪುರ ಶಾಖಾ ವ್ಯವಸ್ಥಾಪಕಿ ಜ್ಯೋತಿ ಬಾರೆಟ್ಟೊ ಹಾಗೂ ಗ್ರಾಹಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು