ಇತ್ತೀಚಿನ ಸುದ್ದಿ
Budget Session | ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳ ಮಂಡನೆ
04/03/2025, 22:19

ಬೆಂಗಳೂರು (reporterkarnataka.com):ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳನ್ನು ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಲಾಯಿತು.
2025ನೇ ಸಾಲಿನ ಬೆಂಗಳೂರು ಅರಮನೆ ( ಭೂ ಬಳಕೆ ಮತ್ತು ನಿಯಂತ್ರಣ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ, ಕರ್ನಾಟಕ 2025ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ,ಮಾರುಕಟ್ಟೆ ವ್ಯವಹಾರ ( ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ)ವಿಧೇಯಕ, ಹಾಗೂ 2025ನೇ ಸಾಲಿನ ಕರ್ನಾಟಕ ಗಿರಿವಿದಾರರ ತಿದ್ದುಪಡಿ)ವಿಧೇಯಕದ ಪ್ರಸ್ತಾವನೆಯನ್ನು ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು ಇಂದು ವಿಧಾನ ಸಭೆಯ ಅಧಿವೇಶನದಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವನೆಯನ್ನು ಅನುಮೋದಿಸಿ ಅಂಗೀಕರಿಸಲಾಯಿತು.