9:44 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Home Minister | ರಾಜ್ಯದಲ್ಲಿ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

05/03/2025, 23:00

ಬೆಂಗಳೂರು(reporterkarnataka.com);ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ರೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಆರ್.ಪಾಟೀಲ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ ಎಂದರು.
ಬಿಜಾಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳನ್ನು ದಾಖಲಿಸಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ.
ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ ಎಂದರು.
ಬಿಜಾಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು