7:55 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ ಸಚಿವ ಸಂತೋಷ ಲಾಡ್ ಮಾಹಿತಿ

06/03/2025, 10:12

ಬೆಂಗಳೂರು(reporterkarnataka.com): ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್
ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು.
ಸದಸ್ಯ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್ ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು.
2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.
ತಿರಸ್ಕರಿಸಿದ ಅರ್ಜಿಗಳಿಗೆ ಸಹಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.
ಇನ್ನೂ ಕೆಲದಿನಗಳಲ್ಲಿ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು,ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು