11:13 AM Thursday6 - March 2025
ಬ್ರೇಕಿಂಗ್ ನ್ಯೂಸ್
Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ… ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು…

ಇತ್ತೀಚಿನ ಸುದ್ದಿ

Social Welfare | ಗಂಗಾ ಕಲ್ಯಾಣ ಯೋಜನೆಯಡಿ ಟಾರ್ಗೆಟ್ ಹೆಚ್ಚಳಕ್ಕೆ ಕ್ರಮ: ಸಚಿವ ಡಾ. ಮಹಾದೇವಪ್ಪ,

06/03/2025, 10:20

ಬೆಂಗಳೂರು(reporterkarnataka.com): ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳ ಭೌತಿಕ ಗುರಿ ಕಡಿಮೆ ಇದೆ ಎನ್ನುವ ಅಭಿಪ್ರಾಯ ಸದಸ್ಯರಿಂದ ವ್ಯಕ್ತವಾಗಿದ್ದು, ಸದರಿ ಕೊಳವೆಬಾವಿಗಳ ಗುರಿಯ(ಟಾರ್ಗೆಟ್) ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ಸರಕಾರ ಅಗತ್ಯ ಕ್ರಮವನ್ನು ಕೈಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ಹೇಳಿದರು.
ವಿಧಾನಸಭೆಯಲ್ಲಿ ಚುಕ್ಕೆಗುರುತಿನ ಪ್ರಶ್ನೆಗೆ ಸದಸ್ಯರಾದ ಸುನೀಲ್
ಕುಮಾರ್ ವಿ., ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಬಡಜನರನ್ನು ಮೆಲೆತ್ತುವ ಉದ್ದೇಶದಿಂದ ಗಂಗಾಕಲ್ಯಾಣ, ಭೂಒಡೆತನ ಯೋಜನೆಗಳನ್ನು ಜಾರಿಗೆ ತಂದಿದ್ದೇ ಕಾಂಗ್ರೆಸ್ ಸರಕಾರ; ಕಾಂಗ್ರೆಸ್ಗೆ ಬಡವರ ಅಭಿವೃದ್ಧಿಯ ಬಗ್ಗೆ ಬದ್ಧತೆ ಇದ್ದು, ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಹೆಚ್ಚಳ, ಗಂಗಾಕಲ್ಯಾಣ ಯೋಜನೆಯ ಭೌತಿಕ ಗುರಿ ಹೆಚ್ಚಳ ಮತ್ತು ಭೂಒಡೆತನ ಯೋಜನೆಗೆ ವಿಶೇಷ ಒತ್ತು ನೀಡಲಾಗುವುದು ಸದನಕ್ಕೆ ತಿಳಿಸಿದ ಸಚಿವ ಮಹಾದೇವಪ್ಪ ಅವರು ಸದನದ ಸದಸ್ಯರು ನೀಡುವ ಸಲಹೆಗಳನ್ನು ಸ್ವೀಕರಿಸಲಾಗುವುದು; ಮಾಡಬೇಕಾಗಿರುವ ಕೆಲಸಗಳನ್ನು ಮಾಡೇ ಮಾಡಲಾಗುವುದು; ಮಾಡಲಾರದ್ದನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.
ಭೂಚೇತನ ಯೋಜನೆಯಡಿ ವಿಜಯಪುರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾಗಿದ್ದು,ಈಗಾಗಲೇ ತನಿಖೆಗೆ ಸೂಚಿಸಲಾಗಿದ್ದು;ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು