10:02 PM Thursday6 - March 2025
ಬ್ರೇಕಿಂಗ್ ನ್ಯೂಸ್
BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ… Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:…

ಇತ್ತೀಚಿನ ಸುದ್ದಿ

Health | ಆಯುಷ್ಮಾನ್ ಯೋಜನೆಗೆ ಪ್ರಸ್ತುತ ಶೇ 75ರಷ್ಟು ಹಣವನ್ನ ರಾಜ್ಯ ಸರಕಾರವೇ ಭರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

06/03/2025, 21:38

ಬೆಂಗಳೂರು(reporterkarnataka.com): ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಅನುದಾನವನ್ನು ಒದಗಿಸಬೇಕು. ಆದರೆ ಕರ್ನಾಟಕದಲ್ಲಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ 75 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದೆ ಎಂದರು. ಕೇಂದ್ರ ಸರ್ಕಾರ ಕೇವಲ ಶೇ 25 ರಷ್ಟು ಅನುದಾನ ನೀಡುತ್ತಿದೆ. ಇನ್ನು ಯೋಜನೆಯಡಿ ಚಿಕಿತ್ಸಾ ವೆಚ್ಚಗಳು 2018 ರಿಂದ ಪರಿಷ್ಕರಣೆ ಆಗಿಲ್ಲ.‌ ಪರಿಷ್ಕರಣೆಗೆ ಮುಂದಾದರೆ ಯೋಜನೆಗೆ ರಾಜ್ಯ ಸರ್ಕಾರವೇ ಶೇ 90 ರಷ್ಟು ಅನುದಾನ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಅನುದಾನದ ಪಾಲು ಶೇ 10ಕ್ಕೆ ಬಂದು ನಿಲ್ಲಲಿದೆ ಎಂದು ವಿವರಿಸಿದರು.
70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆ ಅನುಷ್ಠಾನಕ್ಕೆ 68 ಕೋಟಿ ಅಗತ್ಯತೆ ಇದ್ದು, ಶೇ 60 ರಷ್ಟು ಹಣಕಾಸನ್ನ ಕೇಂದ್ರ ಸರ್ಕಾರ ಭರಿಸಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಹಂಚಿಕೆ ಬಗ್ಗೆ ರಾಜ್ಯ ಸ್ಪಷ್ಟನೆ ಕೇಳಿದೆ. ಆದರೆ ಇಲ್ಲಿಯ ವರೆಗು ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ಪಾಲುದಾರಿಕೆ ಬಗ್ಗೆ ಉತ್ತರಿಸಿಲ್ಲ. ಆದರೆ ಈಗಾಗಲೇ ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಒದಗಿಸಿಕೊಟ್ಟಿದೆ. ಆದರೆ ಇದರಲ್ಲಿ ಕೇಂದ್ರ ಸರ್ಕಾರ 68 ಲಕ್ಷ ಜನರಿನ್ನ ಮಾತ್ರ ಆಯುಷ್ಮಾನ್ ಭಾರತ್ ಯೋಜನೆಯಡಿ ಪರಿಗಣಿಸುತ್ತಿದೆ.
ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರನ್ನ ಯೋಜನೆಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಅಡಿ ಫಲಾನುಭವಿಗಳಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಸ್ಪಷ್ಟಪಡಿಸಿದರು. ಅಲ್ಲದೇ APL ಕಾರ್ಡ್ ಹೊಂದಿದವರಿಗು ರಾಜ್ಯ ಸರ್ಕಾರ ಯೋಜನೆಯಡಿ ಶೇ 30 ರಷ್ಟು ಚಿಕಿತ್ಸಾ ವೆಚ್ಚಗಳನ್ನು ಭರಿಸುತ್ತಿದೆ. ಪ್ರತ್ಯೇಕವಾಗಿ 70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಕುರಿತು ಸ್ಪಷ್ಟನೆ ಬಂದ ಬಳಿಕ ಜಾರಿಗೆ ತರಲಾಗುವುದು ಎಂದರು.
ಆಯುಷ್ಮಾನ್ ಭಾರತ್ ಯೋಜನೆ ವಿಚಾರದಲ್ಲಿ ನೈಜವಾಗಿ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ಒದಗಿಸುತ್ತಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ತಂದು ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಗೆ ಒತ್ತಾಯಿಸಬೇಕು. ರಾಜ್ಯ ಸರ್ಕಾರದಿಂದ ಈ ಪ್ರಯತ್ನ ನಡೆಯುತ್ತಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು