6:41 AM Wednesday12 - March 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು

ಇತ್ತೀಚಿನ ಸುದ್ದಿ

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಆತಂಕದಲ್ಲಿ ಆಲಮಟ್ಟಿ, ನಾರಾಯಣಪುರ, ತುಂಗಭದ್ರಾ ಮಲಪ್ರಭಾ, ಹಾರಂಗಿ ಭಾಗದ ರೈತರು

08/03/2025, 11:21

ಶಿವು ರಾಠೋಡ್ ನಾರಾಯಣಪುರ ಯಾದಗಿರಿ

info.reporterkarnataka@gmail.ಕಂ

ಕರ್ನಾಟಕದಲ್ಲಿರುವ ಪ್ರಮುಖ ಹದಿನಾಲ್ಕು ಜಲಾಶಯಗಳಲ್ಲಿ ಒಂದೆರಡು ಕಡೆ ಬಿಟ್ಟರೆ ಹೆಚ್ಚುನ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ ಕಂಡು ಬಂದಿದೆ. ಹೀಗಿದೆ ನೀರಿನ ಪ್ರಮಾಣ.
ಕರ್ನಾಟಕದಲ್ಲಿ ಬೇಸಿಗೆ ಬಿರುಸುಗೊಳ್ಳುತ್ತಿರುವ ನಡುವೆ ಜಲಾಶಯಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಕುಸಿಯುತ್ತಿದೆ. ತೆಲಂಗಾಣಕ್ಕೆ ನೀರು ಹರಿಸುತ್ತಿರುವ ಕಾರಣದಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡಿದೆ. ಇದಲ್ಲದೇ ತುಂಗಭದ್ರಾ ಜಲಾಶಯದಿಂದ ನೀರು ಹೊರ ಹೋಗುತ್ತಿರುವ ಕಾರಣಕ್ಕೆ ಆ ಜಲಾಶಯದ ಪ್ರಮಾಣವೂ ಕಡಿಮೆಯಾಗಿದೆ. ಬೆಳಗಾವಿಯ ಮಲಪ್ರಭಾ, ಕೊಡಗಿನ ಹಾರಂಗಿ ಜಲಾಶಯದ ನೀರಿನ ಪ್ರಮಾಣ ಶೇ. 50ಕ್ಕಿಂತ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಪ್ರಮುಖ 14 ಜಲಾಶಯಗಳಲ್ಲಿ ಗರಿಷ್ಠ 895.62 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ. ಸದ್ಯ491.18 ಟಿಎಂಸಿ ನೀರು ಸಂಗ್ರಹವಿದೆ. ಶೇ. 55 ರಷ್ಟು ನೀರು ಸಂಗ್ರಹಿಸಲಾಗಿದೆ. ಕಳೆದ ವರ್ಷ ಇದೇ ದಿನ ಎಲ್ಲಾ ಜಲಾಶಯಗಳಲ್ಲಿ312.48 ಟಿಎಂಸಿ ನೀರಿತ್ತು. ಸದ್ಯ ಒಳಹರಿವಿನ ಪ್ರಮಾಣ 118 ಕ್ಯೂಸೆಕ್‌ ಇದ್ದರೆ, ಹೊರ ಹರಿವು 46415ಕ್ಯೂಸೆಕ್‌ ಇದೆ.

ಯಾವ ಜಲಾಶಯದಲ್ಲಿ ಎಷ್ಟಿದೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 123.08ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 49.33 ಟಿಎಂಸಿ ನೀರು ಸಂಗ್ರಹವಿದೆ. ಶೇ.40 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 48.98 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 13067 ಕ್ಯೂಸೆಕ್‌ ಇದೆ.

ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ105.79 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 33.12 ಟಿಎಂಸಿ ನೀರು ಸಂಗ್ರಹವಿದೆ. ಶೇ.31 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ8.63 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ7363 ಕ್ಯೂಸೆಕ್‌ ಇದೆ.

ಬೆಳಗಾವಿ ಜಿಲ್ಲೆಯ ಘಟಪ್ರಭಾ ಜಲಾಶಯದಲ್ಲಿ 51 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 26.14ಟಿಎಂಸಿ ನೀರು ಸಂಗ್ರಹವಿದೆ. ಶೇ. 51ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 28.39 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 99 ಕ್ಯೂಸೆಕ್‌ ಇದೆ.

ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯದಲ್ಲಿ 33.31 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 26.19 ಟಿಎಂಸಿ ನೀರು ಸಂಗ್ರಹವಿದೆ. ಶೇ.79 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 18.28 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 10343 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 12135 ಕ್ಯೂಸೆಕ್‌ ಇದೆ.

ಕೆಆರ್‌ಎಸ್‌ ಪ್ರಮಾಣ
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದಲ್ಲಿ 49.45 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 34.91 ಟಿಎಂಸಿ ನೀರು ಸಂಗ್ರಹವಿದೆ. ಶೇ. 71 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 16.07 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 255 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 3767 ಕ್ಯೂಸೆಕ್‌ ಇದೆ.

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದಲ್ಲಿ 151.75 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ80.76 ಟಿಎಂಸಿ ನೀರು ಸಂಗ್ರಹವಿದೆ. ಶೇ. 53ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ39.72 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು ಕ್ಯೂಸೆಕ್‌ 0 ಇದ್ದರೆ, ಹೊರ ಹರಿವಿನ ಪ್ರಮಾಣ 5434 ಕ್ಯೂಸೆಕ್‌ ಇದೆ.

ಬೆಳಗಾವಿ ಜಿಲ್ಲೆಯ ಮಲಪ್ರಭಾ ಜಲಾಶಯದಲ್ಲಿ 37.73 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 17.03 ಟಿಎಂಸಿ ನೀರು ಸಂಗ್ರಹವಿದೆ. ಶೇ.45 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ11.72 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 2241ಕ್ಯೂಸೆಕ್‌ ಇದೆ.

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಲ್ಲಿ 37.10 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 20.78 ಟಿಎಂಸಿ ನೀರು ಸಂಗ್ರಹವಿದೆ. ಶೇ.56 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ13.45 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 142 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 380 ಕ್ಯೂಸೆಕ್‌ ಇದೆ.

ಸೂಪಾದಲ್ಲೂ ಇಳಿಕೆ
ಉತ್ತರ ಕನ್ನಡ ಜಿಲ್ಲೆಯ ಸೂಪಾ ಆಲಮಟ್ಟಿ ಜಲಾಶಯದಲ್ಲಿ 145.33 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 86.15 ಟಿಎಂಸಿ ನೀರು ಸಂಗ್ರಹವಿದೆ. ಶೇ.59 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ58.46 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 7468 ಕ್ಯೂಸೆಕ್‌ ಇದೆ.

ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ 30.42 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 29.28 ಟಿಎಂಸಿ ನೀರು ಸಂಗ್ರಹವಿದೆ. ಶೇ.96 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 19.99 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 695ಕ್ಯೂಸೆಕ್‌ ಇದೆ.

ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ 19.52 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 14.32 ಟಿಎಂಸಿ ನೀರು ಸಂಗ್ರಹವಿದೆ. ಶೇ. 73ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ11.74 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು95 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 900 ಕ್ಯೂಸೆಕ್‌ ಇದೆ.

ಉಡುಪಿ ಜಿಲ್ಲೆಯ ವಾರಾಹಿ ಜಲಾಶಯದಲ್ಲಿ 31.10 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 17.83 ಟಿಎಂಸಿ ನೀರು ಸಂಗ್ರಹವಿದೆ. ಶೇ.57 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 7. 92ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 0 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 1645ಕ್ಯೂಸೆಕ್‌ ಇದೆ.

ಭದ್ರಾದಲ್ಲಿ ಸಾಧಾರಣ
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಜಲಾಶಯದಲ್ಲಿ 71.54 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ51.48 ಟಿಎಂಸಿ ನೀರು ಸಂಗ್ರಹವಿದೆ. ಶೇ.72 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 25.73 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 56 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 3575 ಕ್ಯೂಸೆಕ್‌ ಇದೆ.

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ 8.50 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಸದ್ಯ 3.84 ಟಿಎಂಸಿ ನೀರು ಸಂಗ್ರಹವಿದೆ. ಶೇ.45 ರಷ್ಟು ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿದೆ. ಕಳೆದ ವರ್ಷ ಇದೇ ಸಮಯದಲ್ಲಿ 3.38 ಟಿಎಂಸಿ ಸಂಗ್ರಹವಿತ್ತು. ಜಲಾಶಯದ ಒಳಹರಿವು 106 ಕ್ಯೂಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 100 ಕ್ಯೂಸೆಕ್‌ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು