7:18 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Shabana Azmi | 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಬಹುಭಾಷಾ ನಟಿ ಶಬಾನಾ ಆಜ್ಮಿಗೆ ಪ್ರಶಸ್ತಿ ಪ್ರದಾನ

10/03/2025, 20:38

ಬೆಂಗಳೂರು(reporterkarnataka.com):ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು.
ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
“ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.
ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.


ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.
ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು.
ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು