8:53 PM Tuesday11 - March 2025
ಬ್ರೇಕಿಂಗ್ ನ್ಯೂಸ್
ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ..

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ; ಮಂಗಳೂರಿನಲ್ಲಿ 35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ

11/03/2025, 20:42

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿನಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಂಗಳವಾರ ಶಾಸಕ ಸಿ. ಎನ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ ಸಹಭಾಗಿತ್ವದ ಬದಲಿಗೆ ಸರ್ಕಾರ ಅಥವಾ ಎಪಿಎಂಸಿಯ ಸ್ವಂತ ನಿಧಿಯಿಂದ ಮಾರುಕಟ್ಟೆ ಅನುಷ್ಠಾನಗೊಳಿಸಲು ನಿರ್ಧರಿಸಿ ಆರ್ಥಿಕ ಇಲಾಖೆಗೆ ಕಡತ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ದಾಸನಪುರ, ಮೈಸೂರು, ಕೋಲಾರ ಎಪಿಎಂಸಿಗಳಲ್ಲಿ ಪಿಪಿಪಿ ಮಾದರಿಯಲ್ಲಿ ಬಯೋ ಸಿಎನ್ಜಿ ಪ್ಲಾಂಟ್ಗಳ ಸ್ಥಾಪನೆಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅನುಮೋದನೆ ಪಡೆಯಲು ಡಿಪಿಆರ್ ಹಾಗೂ ಆರ್ಎಫ್ಪಿಗಳನ್ನು ಸಲ್ಲಿಸಲಾಗಿದೆ.
ರಾಯಚೂರಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸಲು ಅನುಮೋದನೆಯಾಗಿದ್ದು, ಟೆಂಡರ್ ಕರೆಯಲಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಪಡೆಯಲಾಗಿದ್ದು, ಪರಿಶೀಲನೆ ಹಂತದಲ್ಲಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲ ಎಪಿಎಂಸಿಗಳ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನಸ್ ಸಹಾಯದೊಂದಿಗೆ ಇಆರ್ಪಿ ಅಭಿವೃದ್ಧಿಪಡಿಸಲಾಗುತ್ತಿದೆ. 8 ಮಾಡ್ಯೂಲ್ಗಳಲ್ಲಿ 4 ಮಾಡ್ಯೂಲ್ಗಳು ಪೂರ್ಣಗೊಂಡಿದ್ದು, ಇತರ 4 ಪ್ರಗತಿಯಲ್ಲಿವೆ.
ಬಳ್ಳಾರಿ, ಗದಗ, ರಾಣೆಬೆನ್ನೂರು ಹಾಗೂ ಮೈಸೂರು ಎಪಿಎಂಸಿಗಳಲ್ಲಿ ಶೀತಲಗೃಹ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಬಸವನಬಾಗೇವಾಡಿ ಮತ್ತು ಯಲಬುರ್ಗಾಗಳಲ್ಲಿ ಆರ್ಐಡಿಎಫ್ 29ರ ಅಡಿ ಶೀತಲಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ನಬಾರ್ಡ್ ಕಾಮಗಾರಿಗಳ ಯೋಜನೆ ಅಡಿಯಲ್ಲಿ ಗ್ರಾಮೀಣ ಮಾರುಕಟ್ಟೆಗಳ ಅಭಿವೃದ್ಧಿ ಮಾಡಲಿದ್ದು, ಆರ್ಐಡಿಎಫ್ -28 ಅಡಿ ಸುಮಾರು 179.13 ಕೋಟಿ ರೂ. ವೆಚ್ಚದಲ್ಲಿ 18 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅವುಗಳಲ್ಲಿ 6 ಪೂರ್ಣಗೊಂಡಿವೆ. 11 ಪ್ರಗತಿಯಲ್ಲಿದ್ದು, ಒಂದು ಕಾಮಗಾರಿ ಕೈಬಿಡಲಾಗಿದೆ ಎಂದು ಸಚಿವರು ತಿಳಿಸಿದರು.
ಆರ್ಐಡಿಎಫ್ -28ರ ಅಡಿ ಅಂದಾಜು 210 ಕೋಟಿ ರೂ. ವೆಚ್ಚದಲ್ಲಿ 70 ಕಾಮಗಾರಿಗಳನ್ನು ಕೈಗೊಂಡಿದ್ದು, 28 ಮುಗಿದಿವೆ, 42 ಕಾಮಗಾರಿಗಳು ಪ್ರಗತಿಯಲ್ಲಿವೆ.
ಆರ್ಐಡಿಎಫ್ -30ರ ಅಡಿಯಲ್ಲಿ 144.75 ಕೋಟಿ ರೂ. ವೆಚ್ಚದಲ್ಲಿ 10 ಕಾಮಗಾರಿ ಕೈಗೊಂಡಿದ್ದು, ಟೆಂಡರ್ ಕರೆಯಲಾಗಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕದಲ್ಲಿ ಮಾರುಕಟ್ಟೆ ಪ್ರಾಂಗಣದಲ್ಲಿ ರೈತಭವನ, ಮುಚ್ಚು ಹರಾಜುಕಟ್ಟೆ, ಶೌಚಾಲಯ, ರಸ್ತೆ, ಚರಂಡಿ,ಗೋದಾಮು, ಮಳಿಗೆ ಮತ್ತಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್
ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು