11:07 PM Tuesday11 - March 2025
ಬ್ರೇಕಿಂಗ್ ನ್ಯೂಸ್
Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ

ಇತ್ತೀಚಿನ ಸುದ್ದಿ

MIS | ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯ

11/03/2025, 22:58

ನವದೆಹಲಿ(reporterkarnataka.com): ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ (MIS) ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ ಮಹತ್ವದ ಸಮಾಲೋಚನೆ ಸಹ ನಡೆಸಿದರು.
ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.
*MIS (ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ)ಯಡಿ ನೆರವು ಅಗತ್ಯ:* ಕರ್ನಾಟಕದಲ್ಲಿ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ ಅನುಷ್ಠಾನ ಅತ್ಯಗತ್ಯವಾಗಿದೆ ಎಂದು ಕೃಷಿ ಸಚಿವರಿಗೆ ಖುದ್ದು ಮನವರಿಕೆ ಮಾಡಿಕೊಟ್ಟರು.

ಮಾರುಕಟ್ಟೆಯಲ್ಲಿನ ತೀವ್ರ ಬೆಲೆ ಕುಸಿತದಿಂದಾಗಿ ಕರ್ನಾಟಕದ ಅನೇಕ ಕೆಂಪು ಮೆಣಸಿನಕಾಯಿ ರೈತರು ಗಂಭೀರ ಸಮಸ್ಯೆ, ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿದ್ದು, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಕೃಷಿ ಸಚಿವರೊಂದಿಗೆ ಕೆಲ ಕಾಲ ಮಹತ್ವದ ಚರ್ಚೆ ನಡೆಸಿದರು.

ಕರ್ನಾಟಕದ ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ರೈತರು ಕೆಂಪು ಮೆಣಸಿನಕಾಯಿ ಕೃಷಿಯನ್ನು ಅವಲಂಬೀಸಿದ್ದಾರೆ ಮತ್ತು ಕೆಂಪು ಮೆಣಸಿನಕಾಯಿ ಪ್ರಸ್ತುತ ಮಾರುಕಟ್ಟೆ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಅನೇಕ ರೈತರನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದೆ.

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯಕ್ಕೆ ವಿಸ್ತರಿಸುವ ತುರ್ತು ಅವಶ್ಯಕತೆಯಿದ್ದು, ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದೆ ಎಂದು ಕೃಷಿ ಸಚಿವರನ್ನು ಒತ್ತಾಯಿಸಿದರು ಸಚಿವ ಪ್ರಲ್ಹಾದ ಜೋಶಿ.

*ಕೃಷಿ ಸಚಿವರ ಭರವಸೆ:* ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು