6:24 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ ಸಿದ್ದರಾಮಯ್ಯ ಜತೆ ತಮಿಳುನಾಡು ಅರಣ್ಯ ಸಚಿವರ ಚರ್ಚೆ

12/03/2025, 15:25

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಡಿಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಚರ್ಚಿಸಿದರು.
ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.


ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದರು.
ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು