ಇತ್ತೀಚಿನ ಸುದ್ದಿ
ಮಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ; ಪರಿಶೀಲನೆ
12/03/2025, 23:51
ಮಂಗಳೂರು(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.




ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.
ಬಳಿಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಪರೀಕ್ಷಾ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಇದ್ದರು.














