9:19 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ

22/05/2021, 09:20

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnatak@gmail.com

ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ಹೇಳಿದರು. 

2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು