1:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Food & Civil Supply | ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆಗೆ ಸರಕಾರ ಆದೇಶ

13/03/2025, 21:41

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ತಿಂಗಳಿನಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.
ಅದರಂತೆ ಫೆಬ್ರವರಿ-2025 ತಿಂಗಳಿನಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ತಿಂಗಳಿನಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು