8:04 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು