5:56 AM Monday17 - March 2025
ಬ್ರೇಕಿಂಗ್ ನ್ಯೂಸ್
Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.…

ಇತ್ತೀಚಿನ ಸುದ್ದಿ

ವ್ಯಾಪಾರ ಶೆಡ್ ತೆರವು: ಕಾಂಗ್ರೆಸ್ ಮುಖಂಡ, ಶೃಂಗೇರಿ ಪಟ್ಟಣ ಪಂಚಾಯಿತಿ ಸದಸ್ಯ ಪೊಲೀಸರ ಸಮ್ಮುಖದಲ್ಲೇ ಆತ್ಮಹತ್ಯೆ ಯತ್ನ

15/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
*ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?:*
ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ.
ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಶ್ರೀಮಂತರ ಅಪಾರ್ಟ್ಮೆಂಟ್ ನಿರ್ಮಾಣ, ಕೆರೆ ಹಾಗೂ ಸರಕಾರಿ ಭೂಮಿ ಅಕ್ರಮ ಸ್ವಾಧೀನ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಶಾಸಕ ರಾಜೇಗೌಡರನ್ನು ಗೆಲ್ಲಿಸಲು ನಾವು ಜೀವ ತೇಯ್ದಿದ್ದೇವೆ. ಅವರೂ ಇಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆತ್ಮಹತ್ಯೆಗೆ ಯತ್ನಿಸುವ ಮೊದಲು ರಫೀಕ್ ಅಹಮದ್ ಹೇಳಿದ್ದಾಗಿ ತಿಳಿದುಬಂದಿದೆ.
*ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು?:*
ಬಡವರು ಜೀವನ ಸಾಗಿಸಲು ಶೆಡ್ ಹಾಕಿದರೆ ಅಕ್ರಮ, ಆದರೆ ಶ್ರೀಮಂತರ ಹೋಟೆಲ್, ಅಪಾರ್ಟ್ಮೆಂಟ್, ಕೆರೆ ಒತ್ತುವರಿ ಮಾಡಿದರೂ ಕ್ರಮವಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ವಿಷಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು