4:05 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

15/03/2025, 17:58

ಬೆಂಗಳೂರು(reporterkarnataka.com): ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದರು.
ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್‌ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್‌ಎಚ್‌ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳಾಗುತ್ತಿದ್ದವು. ಹೀಗಾಗಿ ಇಲ್ಲಿನ ಸೇವಾ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸುರಕ್ಷತಾ ಸಮಸ್ಯೆಗಳ ಹಿತದೃಷ್ಟಿಯನ್ನು ಪರಿಗಣಿಸಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಇತರೆ ಎಲ್ಲ ವಾಹನಗಳು (ಕಾರುಗಳು, ಜೀಪುಗಳು ಇತ್ಯಾದಿ) ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿರುತ್ತದೆ. ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವರದಿ ನೀಡಿರುತ್ತಾರೆ ಎಂಬುದಾಗಿ ಸಚಿವರು ತಿಳಿಸಿದ್ದಾರೆ.
ಇನ್ನು ಎಕ್ಸ್‌ಪ್ರೆಸ್‌ವೇದಲ್ಲಿನ ಎರಡೂ ಬದಿಯ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ಒಪ್ಪಂದದ ಪ್ರಕಾರ ಬೆಂಗಳೂರಿನಿಂದ ಮೈಸೂರು ಎನ್‌ಎಚ್‌-275 ರವರೆಗೆ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದಲ್ಲಿ ವಂಡರ್‌ಲಾ, ಬಿಡದಿ ಬಳಿ ನಿರ್ಗಮನಕ್ಕೆ ದಾರಿ ಇದ್ದರೆ, ಬಿಡದಿಯಲ್ಲಿ ಆಗಮನಕ್ಕೂ ಅವಕಾಶವಿದೆ. ರಾಮನಗರದಲ್ಲಿ ಒಂದು ಕಡೆ, ಚನ್ನಪಟ್ಟಣ, ಮದ್ದೂರು, ಮಂಡ್ಯದಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ತೂಬಿನಕೆರೆ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಆಗಮನಕ್ಕೆ ಅವಕಾಶವಿದ್ದರೆ, ಭಾರೀ ವಾಹನಗಳಿಗೆ ನಿರ್ಗಮಕ್ಕೆ ಅನುಮತಿಯನ್ನು ನೀಡಲಾಗಿಲ್ಲ. ಶ್ರೀರಂಗಪಟ್ಟಣದ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
*ಮೈಸೂರಿಂದ ಬೆಂಗಳೂರಿಗೆ ಆಗಮನ-ನಿರ್ಗಮನ:*
ಶ್ರೀರಂಗಪಟ್ಟಣ, ತೂಬಿನಕೆರೆ ಇಂಡಸ್ಟ್ರಿಯಲ್‌ ಏರಿಯಾ, ಮಂಡ್ಯ, ಮದ್ದೂರು, ಚನ್ನಪಟ್ಟಣ, ಬಿಡದಿಗಳಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವಿದ್ದರೆ, ರಾಮನಗರದಲ್ಲಿ ಒಂದು ಕಡೆ ಅವಕಾಶವನ್ನು ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು