11:50 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ: ಕೇಂದ್ರ ಸಚಿವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ

16/03/2025, 19:56

ಹಾವೇರಿ(reporterkarnataka.com): ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬ‌ರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತ ಪರವಾದ ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನಷ್ಟು ರೈತ ಪರ ಹಾಗೂ ಪಾರದರ್ಶಕವಾಗಿ ಜಾರಿ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೇ ಅನಗತ್ಯವಾಗಿ ವಿಮಾ ಪರಿಹಾರ ಪಡೆಯುವುದನ್ನು ತಪ್ಪಿಸಿದಂತಾಗುತ್ತದೆ.
ಇನ್ನೊಂದು ಮಹತ್ವದ ವಿಷಯವೆಂದರೆ ಬೆಳೆ ಹಾನಿಯ ಪ್ರಮಾಣವನ್ನು ಹಿಂದಿನ ಏಳು ವರ್ಷಗಳ ಅಂದಾಜು ಪಡೆಯುವುದರಿಂದ ಸರಿಯಾದ ಹಾನಿಯ ಪ್ರಮಾಣವನ್ನು ತಿಳಿದುಕೊಳ್ಳಲು ಸಾಧ್ಯವಾಗುವುದಿಲ್ಲ. ಮಳೆಯ ಅನಿಶ್ಚಿತತೆ ಹಾಗೂ ಹವಾಮಾನ ವೈಪರಿತ್ಯರಿಂದ ಏಳು ವರ್ಷಗಳ ಅವಧಿಯಲ್ಲಿ ಬೆಳೆ ಹಾನಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಬೆಳೆ ಹಾನಿಯ ಬಗ್ಗೆ ಪ್ರಸ್ತುತ ಹಂಗಾಮು ವರ್ಷ ಹಾಗೂ ಹಿಂದಿನ ವರ್ಷ ಸೇರಿ ಎರಡು ವರ್ಷಗಳನ್ನು ಪರಿಗಣಿಸಬೇಕು. ಈ ಎರಡೂ ಸುಧಾರಣೆಗಳನ್ನು ಜಾರಿಗೆ ತರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಅಲ್ಲದೇ ಈಗಾಗಲೇ ಪ್ರೀಮಿಯಂ ಮೊತ್ತ ನಿಗದಿಯಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಯಾವುದೇ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ.
ಈ ಎರಡು ಸುಧಾರಣೆಗಳನ್ನು ತಂದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿಮ್ಮ ಉದ್ದೇಶದಂತೆ ಫಸಲ್ ಬಿಮಾ ಯೋಜನೆ ರೈತರ ಆಪದ್ಭಾಂದವ ಆಗಲಿದೆ. ದಯವಿಟ್ಟು ಈ ವಿಷಯದಲ್ಲಿ ತಾವು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ಅಧ್ಯಕ್ಷತೆಯಲ್ಲಿ ಈ ವಿಷಯದ ಕುರಿತು ಚರ್ಚಿಸಲು ನಾನು ಆಸಕ್ತನಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು