6:11 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

17/03/2025, 13:06

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ.
ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋದಿಸಿದ್ದೀರಿ ಎಂದು ಮುಖ್ಯಮಂತ್ರಿ ನುಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ. ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು