9:09 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ: ಶಿಕ್ಷಣ ಇಲಾಖೆಗೆ ಡಾ. ಬಿಳಿಮಲೆ ಆಗ್ರಹ

17/03/2025, 20:11

ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಅಂತಹ ಕೆಲವು ಶಾಲೆಗಳ ಪಟ್ಟಿಯನ್ನು ಒದಗಿಸಿದೆ. ಇಲಾಖಾಧಿಕಾರಿಗಳು ತನಿಖೆ ಮಾಡಿದರೆ ಸತ್ಯ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕನ್ನಡ ಭಾಷೆಯ ಬಗ್ಗೆ ಇಲಾಖೆ ತೋರುವ ಅಗೌರವವಷ್ಟೇ ಅಲ್ಲ ನೆಲದ ಕಾನೂನಿನ ಉಲ್ಲಂಘನೆಯೂ ಆಗಿರುತ್ತದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.
ಶಿಕ್ಷಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ೨೦೨೦ರಲ್ಲಿ ರಚನೆಯಾಗಿರುವ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು