ಇತ್ತೀಚಿನ ಸುದ್ದಿ
ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ
17/03/2025, 21:24

ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು.
ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ ,ಮಧ್ಯಾಹ್ನ ಸಮಾಜ ಬಾಂಧವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ,ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ದೂರಿ ವಾದ್ಯಘೋಷ್ಠಿ ,ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು .