9:32 PM Monday17 - March 2025
ಬ್ರೇಕಿಂಗ್ ನ್ಯೂಸ್
KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:… ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ… ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ:… Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ…

ಇತ್ತೀಚಿನ ಸುದ್ದಿ

Drugs | ಬೃಹತ್ ಡ್ರಗ್ಸ್ ಜಾಲ ಬೇಧಿಸಿದ ಮಂಗಳೂರು ಪೊಲೀಸರು: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ಲಾಘನೆ

17/03/2025, 21:26

ಬೆಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಶ್ಲಾಘಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದು ಆಫ್ರಿಕಾ ಮೂಲದ ಇಬ್ಬರು ಮಹಿಳೆಯರು ಮತ್ತು ಸ್ಥಳೀಯ ಯುವಕನೋರ್ವನನ್ನು ಬಂಧಿಸಿರುವುದು ಪೋಲೀಸರ ಈ ಸಾಹಸಕಾರಿ ಕಾರ್ಯಾಚರಣೆಯನ್ನು ಪ್ರತಿಯೊಬ್ಬ ನಾಗರಿಕನೂ ಕೂಡ ಪ್ರಶಂಸಿಸಬೇಕಾಗಿದೆ.
ಇದಕ್ಕಾಗಿ ರಾಜ್ಯ ಗೃಹ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯನ್ನೂ ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಂಗಳೂರು ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಇತ್ತೀಚಿನ ದಿನಗಳಲ್ಲಿ ಈ ಹೆಸರಿಗೆ ಮಸಿ ಬಳಿಯುವಂತೆ ಡ್ರಗ್ಸ್ ದಂಧೆ, ಅಕ್ರಮ ದಂಧೆಗಳು ಕಾರ್ಯಾಚರಿಸುತ್ತಿದ್ದವು. ಇದು ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಹೊರಜಿಲ್ಲೆ, ರಾಜ್ಯ, ರಾಷ್ಟ್ರಗಳಿಂದ ಬಂದು ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪೋಷಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಪೊಲೀಸ್ ಇಲಾಖೆ ಡ್ರಗ್ಸ್ ದಂಧೆಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿದ್ದು ಅದರಲ್ಲಿ ಯಶಸ್ಸನ್ನೂ ಕಂಡಿದೆ. ಮುಂದೆಯೂ ಪೊಲೀಸ್ ಇಲಾಖೆ ದಂಧೆಕೋರರನ್ನು ನಿಯಂತ್ರಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರಂತರ ಶ್ರಮಿಸುವ ಅಗತ್ಯವಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು