2:36 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

17/03/2025, 21:32

ಬೆಂಗಳೂರು (reporterkarnataka.com): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (b), (c) (d) ಮತ್ತು (e) ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಕಳೆದ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪನಿ ಮತ್ತು 1 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕ್ಕದ್ದಮೆ ಹೂಡಲಾಗಿದೆ. 2022-23 ನೇ ಸಾಲಿನಲ್ಲಿ ಒಟ್ಟು 06, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25 ನೇ ಸಾಲಿನಲ್ಲಿ 4 ನಕಲಿ ಔಷಧ ತಯಾರಕರ ಮತ್ತು 1 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಕಾನೂನು ರೀತ್ಯಾ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗಿದೆ. ಈ ಬಗ್ಗೆ ಕೂಡಲೇ Drug Recall policy ಜಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು